ಕರ್ನಾಟಕ; ಹೊಸ ಪ್ರಕರಣ, ಸಾವಿನ ಸಂಖ್ಯೆ ಕೊಂಚ ಇಳಿಕೆ

ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. 24 ಗಂಟೆಯಲ್ಲಿ ರಾಜ್ಯದಲ್ಲಿ 35,297 ಹೊಸ ಪ್ರಕರಣ ದಾಖಲಾಗಿದೆ. ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 34,057 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 344 ಜನರು ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 2088488ಕ್ಕೆ ಏರಿಕೆಯಾಗಿದೆ.

వాట్సాప్ గ్రూప్ లో షేర్ చేయండి