ಬಿಜೆಪಿಯವರು ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ; ಡಿಕೆಶಿ

ಬೆಂಗಳೂರು, ಮೇ 20: ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತ ನಡೆಯುತ್ತಿದೆ ಎಂಬ ಮಾಹಿತಿ ನನಗೆ ಸಿಗುತ್ತದೆ ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, 'ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಇದು ಸಂವಿಧಾನ ಬದ್ಧವಾಗಿ ಬಂದಿರುವ